ನಾಡು

Land

ರಾಷ್ಟ್ರೀಯ ಮತದಾರರ ದಿನ ಮತ್ತು ಪ್ರಜಾಪ್ರಭುತ್ವ

ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದೂ, ಪ್ರತಿಯೊಂದು ಚುನಾವಣೆಯಲ್ಲಿ ನಿಭೀ೯ತರಾಗಿ ಮತ್ತು ಧರ್ಮ,ಜನಾಂಗ,ಜಾತಿ,ಮತ,ಭಾಷೆ ಅಥವಾ ಯಾವುದೇ ಪ್ರೇರೇಪಣೆ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದೂ ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ.