ಅಸ್ಥಿರವಾಗುತ್ತಿರುವ ಕುಟುಂಬ ವ್ಯವಸ್ಥೆ
ದೇಶ ಅಭಿವೃದ್ಧಿ ಆದಂತೆ, ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆ ಶಿಥಿಲವಾಗಿ ಹಲವು ಸಂಪ್ರದಾಯಗಳು ಮೊಟಕುಗೊಂಡರೆ ಇನ್ನು ಕೆಲವು ಸಂಪೂರ‍್ಣ ಮಾಯವಾಗುವವು. ಇದು ಅನಿವಾರ್ಯವೆ? ಸಂಪ್ರದಾಯಗಳ ಉದ್ದೇಶಗಳನ್ನು ಅರಿತು ಮೂಲಭೂತ ಅಂಶಗಳನ್ನು ಉಳಿಸಿಕೊಂಡು, ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವೆ? ಈ ನಿಟ್ಟಿನಲ್ಲಿ, ಇಂಥ ಪರಿಸ್ಥಿತಿಗೆ ನಾವು ಬಂದು ಮುಟ್ಟಿರುವ ಕಾರಣಗಳನ್ನು ಕೆದಕಿ ನೋಡುವುದು ಅವಶ್ಯ.